ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಪಟ್ಟಣದಲ್ಲಿ ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( ರಿ) ತಾಲೂಕು ಘಟಕ ಹುಣಸಗಿ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು.
ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ರಾಜಾ ವೆಂಕಟಪ್ಪ ನಾಯಕ ಅವರ ಸುಪುತ್ರ ರಾಜಾ ವೇಣುಗೋಪಾಲ ನಾಯಕ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕೊಡೇಕಲ್ ಬಸವ ಪೀಠದ ಪೀಠಾಧಿಪತಿ ವೃಷಭೇಂದ್ರ ಅಪ್ಪನವರು ದಿವ್ಯ ಸಾನಿಧ್ಯವಹಿಸಿದದ್ದರು
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ರಾಜಶೇಖರ ಪಾಟೀಲ್ ವಜ್ಜಲ್, ಹಾಗೂ ಹುಣಸಗಿ ತಾಲೂಕಿನ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಚಂದ್ರಶೇಖರ್ ದಂಡಿನ್ ಸಾಹುಕಾರ್ ಮತ್ತು ಹುಣಸಗಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
*ವರದಿ : ಮೌನೇಶ ಆರ್ ಭೋಯಿ*