ಸಾಮಾಜಿಕ ಜಾಲತಾಣ ಖಾತೆಗಳ ಪ್ರೊಫೈಲ್ ಚಿತ್ರಗಳಲ್ಲಿ ತ್ರಿವರ್ಣ ಧ್ವಜ ಹಾಕುವಂತೆ:- ಮೋದಿಯವರ ಮನವಿ.
ನವದೆಹಲಿ:-ದೇಶದ 77 ನೇ ಸ್ವಾತಂತ್ರ್ಯ ದಿನಾಚರಣೆಗೆ ಕ್ಷಣಗಣನೆ ಆರಂಭವಾಗಿರುವಂತೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದಾದ್ಯಂತ “ಹರ್ ಘರ್ ತಿರಂಗಾ” ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸಾಮಾಜಿಕ ಜಾಲತಾಣ ಖಾತೆಗಳ ಪ್ರೊಫೈಲ್ ಚಿತ್ರಗಳಲ್ಲಿ ತ್ರಿವರ್ಣ ಧ್ವಜ ಹಾಕುವಂತೆ ಮನವಿ ಮಾಡಿಕೊಂಡಿದ್ದಾರೆ.