ಬೆಂಗಳೂರು ; ರಾಜಕೀಯ ಮತ್ತು ಸಾಮಾಜಿಕವಾಗಿ ಅತ್ಯಂತ ಹಿಂದುಳಿದ ಕುಳುವ ಸಮುದಾಯದ ಪಲ್ಲವಿ ಜಿ. ಅವರನ್ನು “ಕರ್ನಾಟಕ ರಾಜ್ಯ ಸಾಂಬರು ಪದಾರ್ಥಗಳ ಅಭಿವೃದ್ಧಿ ಮಂಡಳಿ”ಗೆ ಅಧ್ಯಕ್ಷರಾಗಿ ನೇಮಿಸಿದ ಹಿನ್ನೆಲೆಯಲ್ಲಿ ಸಮುದಾಯದ ಜನರಲ್ಲಿ ಹರ್ಷ ಉಂಟಾಗಿದ್ದು, ಎಕೆಎಂಎಸ್, ಸಂಘದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ, ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದೆ.

ಶಿವಮೊಗ್ಗ ಜಿಲ್ಲೆಯ ಪಲ್ಲವಿ ಜಿ. ಅವರು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ಅಲೆಮಾರಿ, ವಿಮುಕ್ತ ಬುಡಕಟ್ಟು, ಕೊರಮ ಸಮುದಾಯಕ್ಕೆ ಸೇರಿದ್ದು, ಈ ಸಮುದಾಯಕ್ಕೆ ಕಳೆದ ಮೂರು ದಶಕಗಳಿಂದ ಯಾವುದೇ ಅವಕಾಶ ಸಿಕ್ಕಿರಲಿಲ್ಲ. ಪಲ್ಲವಿ ಅವರು ಕಳೆದ ೨೫ ವರ್ಷಗಳಿಂದ ಕಾಂಗ್ರೆಸ್ ನಲ್ಲಿ ತಳಮಟ್ಟದಿಂದ ರಾಜ್ಯ ಮಟ್ಟದವರೆಗೂ ವಿವಿಧ ಹಂತದ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಜನಪ್ರಿಯ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿದ್ದಾರೆ.
ಎಲ್ಲಾ ಜಾತಿ ಧರ್ಮದ ಜನರೊಂದಿಗೆ ಉತ್ತಮ ಒಡನಾಟ ಹೊಂದಿದ್ದು, ಶಿವಮೊಗ್ಗ ಗ್ರಾಮಾಂತರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ನಿರಂತವಾಗಿ ತೊಡಗಿದ್ದು, ಎರಡು ಭಾರಿ ವಿಧಾನ ಸಭೆ ಟಿಕೆಟ್ ವಂಚಿತರಾಗಿದ್ದರು. ಪಲ್ಲಿಯವರ ಪ್ರಮಾಣಿಕೆ ಸೇವೆ ಗುರುತಿಸಿ ಅವಕಾಶ ನೀಡಿದಕ್ಕಾಗಿ ಕೊರಮ ಕೊರಚ ಕೊರವ ಸಮುದಾಯಗಳ ಒಕ್ಕೂಟವಾದ ಅಖಿಲ ಕರ್ನಾಟಕ ಕುಳುವ ಮಹಾಸಂಘ ರಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಕುಮಾರ್ ಏಕಲವ್ಯ, ರಾಜ್ಯಾಧ್ಯಕ್ಷ ಶಿವಾನಂದ ಎಂ. ಭಜಂತ್ರಿ . ರಾಷ್ಟ್ರೀಯ ಕಾರ್ಯದರ್ಶಿ ಆದರ್ಶ್ ಯಲ್ಲಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ