ರೈತರು ಅನಧಿಕೃತ ಲೂಸ್ ಬಿತ್ತನೆ ಬೀಜಗಳ ಬಗ್ಗೆ ಎಚ್ಚರಿಕೆ ವಹಿಸಿ.!

KTN Admin
1 Min Read
 ಮೇ ; ಪ್ರಸಕ್ತ ಮುಂಗಾರು ಹಂಗಾಮು ಚುರುಕಾಗಿದ್ದು, ಭೂಮಿ ಸಿದ್ದತೆ, ಸಮಗ್ರ ಬೆಳೆ ನಿರ್ವಹಣೆ ಜೊತೆಗೆ ಉತ್ತಮ ಇಳುವರಿ ಪಡೆಯುವಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಬಹು ಮುಖ್ಯ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಉತ್ತಮ ಬೆಳವಣಿಗೆ ಹಾಗೂ ಇಳುವರಿ ಪಡೆಯುವಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಅತ್ಯಮೂಲ್ಯವಾಗಿವೆ. ಈ ನಿಟ್ಟಿನಲ್ಲಿ ರೈತರು ಬಿತ್ತನೆ ಬೀಜ ಖರೀದಿ ಮಾಡುವಾಗ ಎಚ್ಚರ ವಹಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ತಿಳಿಸಿದ್ದಾರೆ.
 ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ನಿಗಧಿಪಡಿಸಿದ ಸಹಕಾರಿ ಸಂಘಗಳ ಮೂಲಕ ರಿಯಾಯತಿ ದರದಲ್ಲಿ ವಿವಿಧ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಗುವುದು.  ಜಿಲ್ಲೆಯ ವಿವಿಧ ಕೃಷಿ ಪರಿಕರ ಮಾರಾಟ ಮಳಿಗೆಗಳಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಲಭ್ಯವಿದ್ದು, ರೈತರಿಗೆ ಯಾವುದೇ ಬಿತ್ತನೆ ಬೀಜಗಳ ಕೊರತೆ ಇರುವುದಿಲ್ಲ.  ಆದರೆ ಇತ್ತೀಚಿನ ದಿನಗಳಲ್ಲಿ ಕಳಪೆ, ಬಿಡಿ ಬಿತ್ತನೆ ಬೀಜದ ಹಾವಳಿ ಹೆಚ್ಚಾಗುತ್ತಿದೆ. ಅಲ್ಲಲ್ಲಿ ರೈತರು ಅನಧಿಕೃತ ಲೂಸ್ ಬಿತ್ತನೆ ಬೀಜಗಳನ್ನು ಖರೀದಿಸುತ್ತಿರುವುದಾಗಿ ತಿಳಿದು ಬಂದಿದೆ.
  ಹಲವರು ಲೂಸ್ ಬೀಜಗಳನ್ನು ವಿವಿಧ ಭಾಗಗಳಿಂದ ಸಂಗ್ರಹಿಸಿ ರೈತರಿಗೆ ಮಾರಾಟ ಮಾಡುತ್ತಿದ್ದಾರೆ.  ರೈತರು ಬಿಡಿ ಬೀಜಗಳನ್ನು ಖರೀದಿಸಿ ಬಿತ್ತನೆ ಮಾಡಿ ತೊಂದರೆ ಹಾಗೂ ಬೆಳೆ ನಷ್ಠ ಅನುಭವಿಸಿದಲ್ಲಿ ಯಾವುದೇ ದಾಖಲೆಗಳು ಇಲ್ಲದಿರುವ್ಯದರಿಂದ ಪರಿಹಾರ ಪಡೆಯಲು ಅರ್ಹರಾಗುವುದಿಲ್ಲ.  ಆದ್ದರಿಂದ ರೈತರು ಲೂಸ್ ಬಿತ್ತನೆ ಬೀಜ ಮಾರಾಟ ಜಾಲಕ್ಕೆ ಸಿಲುಕದೇ ಉತ್ತಮ ಗುಣಮಟ್ಟದ ದೃಢೀಕೃತ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಿಂದ ಅಧಿಕೃತ ಕೃಷಿ ಪರಿಕರ ಮಾರಾಟಗಾರರಿಂದ ಖರೀದಿಸಿ ಬಿತ್ತನೆ ಮಾಡಬೇಕು.
 ಜಿಲ್ಲೆಯಲ್ಲಿ ಯಾವುದೇ ಅನಧಿಕೃತ ಲೂಸ್ ಬಿತ್ತನೆ ಬೀಜ ದಾಸ್ತಾನು ಹಾಗೂ ಮಾರಾಟ ಮಾಡುವವರು ಕಂಡು ಬಂದಲ್ಲಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು , ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. 
Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ