ಅಂದು ಕೈಗೊಂಡ ಈ ಯೋಜನೆ ನಮ್ಮ ಸರ್ಕಾರದಿಂದಲೇ ಚಾಲನೆ ಯಾಗುತ್ತಿರುವುದು ಸಂತಸಕರವಾಗಿದೆ ಸಚಿವ: ಮುನಿಯಪ್ಪ.

KTN Admin
1 Min Read

ಬೆಂಗಳೂರು.(ಜುಲೈ ) :: ಡಾ.ಬಾಬು ಜಗಜೀವನ್ ರಾಂ ಅಂತರಾಷ್ಟ್ರೀಯ ಕನ್ವೆಂಕ್ಷನ್ ಸೆಂಟರ್ ಮತ್ತು ಸಂಶೋಧನಾ ಕೇಂದ್ರದ ಉದ್ಘಾಟನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪನವರು ಭಾಗವಹಿಸಿದರು.

ನಂತರ ಮಾತನಾಡಿ ಅಂದಿನ ಸಮಾಜ ಕಲ್ಯಾಣ ಸಚಿವರಾದ ಆಂಜನೇಯ ರವರ ಈ ದೂರದೃಷ್ಟಿ ಸಂಶೋಧನಾ ಕೇಂದ್ರ ಸ್ಥಾಪಿನೆ ಮಾಡಲು ಕ್ರಮ ಕೈಗೊಂಡು ಇಂದು ಯಶಸ್ವಿಯಾಗಿ ಉದ್ಘಾಟನೆಗೆ ಸಿದ್ದವಾಗಿರುವುದು ಸಂತಸಕರವಾಗಿದ್ದು ಈ ಸಂದರ್ಭದಲ್ಲಿ ಅವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಈ ಸಂಶೋಧನಾ ಸಂಸ್ಥೆಯಿಂದ ವಿದ್ಯಾರ್ಥಿಗಳು ಉತ್ತಮ ಕಲಿಕೆಗೆ ಸಹಕಾರಿಯಾಗುತ್ತಿದೆ ಎಂದರು

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ನೇತೃತ್ವದಲ್ಲಿ ಉದ್ಘಾಟನೆ ಯಾಗುತ್ತಿರುವ ಹಿನ್ನಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನ ಸೇರಿ ಕಾರ್ಯಕ್ರಮ ವನ್ನು ಯಶಸ್ವಿಯಾಗಿ ಮಾಡಬೇಕು ಎಂದರು.

ಹಸಿರು ಕ್ರಾಂತಿಯ ಹರಿಕಾರ ಜಗಜೀವನ್ ರಾಂ ರವರ ನೆನಪಿನ ಗುರುತಾಗಿ ನಿರ್ಮಾಣ ವಾಗಿರುವ ಈ ಸಂಶೋಧನಾ ಕೇಂದ್ರ ಎಲ್ಲಾ ವರ್ಗದವರಿಗೂ ಅನುಕೂಲವಾಗಬೇಕು ಎಂದರು.

 

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಮಹದೇವಪ್ಪ, ಲಿಡ್ಕರ್ ಅಧ್ಯಕ್ಷ ಮಂಜುನಾಥ,ಹೆಚ್ ಆಂಜನೇಯ, ಚಂದ್ರಪ್ಪ ,ಶಾಸಕ ಬಸವಂತಪ್ಪ, ಎಲ್ ಹನುಮಂತ್ಯ ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ