ಶಹಾಪುರ. ಕಳೆದ ಎರಡು ಮೂರು ವರ್ಷಗಳಿಂದ ರಾಜ್ಯದಲ್ಲಿ ಭೀಕರ ಬರಗಾಲದಿಂದ ಮುಂಗಾರು ಹಿಂಗಾರು ಮಳೆ ಸರಿಯಾಗಿ ಬಾರದ ಕಾರಣ ರೈತರು ತುಂಬಾ ಸಂಕಷ್ಟದಲ್ಲಿದ್ದಾರೆ. ರೈತರ ಕೃಷಿ ಸಾಲ ಮನ್ನಾ ಮಾಡುವಂತೆ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮಹೇಶ ಹುಜರಾತಿ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ರೈತರು ಸಾಲದ ಸುಳಿಯಲ್ಲಿ ಸಿಲುಕಿ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಲ ತೀರಿಸಲು ಜಮೀನು ಜಾನುವಾರಗಳು ಮಾರಾಟಕ್ಕೆ ಮುಂದಾಗಿದ್ದಾರೆ ಇತ್ತೀಚಿಗೆ ರೈತರ ಆತ್ಮಹತ್ಯೆ ಪ್ರಕರಣಗಳು ದೇಶದಲ್ಲಿ ಹೆಚ್ಚಾಗುತ್ತಿವೆ ಆದ್ದರಿಂದ ಮುಂಬರುವ ಕೇಂದ್ರ ಬಜೆಟಿನಲ್ಲಿ ಸಹಕಾರಿ ಬ್ಯಾಂಕ್. ರಾಷ್ಟ್ರೀಕೃತ ಬ್ಯಾಂಕ್. ಖಾಸಗಿ ಬ್ಯಾಂಕುಗಳಲ್ಲಿನ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಬೇಕು ಜೊತೆಗೆ ಕೃಷಿ ಚಟುವಟಿಕೆಗಳಿಗೆ ರೈತರಿಗೆ 10 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಬೇಕು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ಪ್ರತಿವರ್ಷ ರೈತರಿಗೆ ನೀಡುತ್ತಿರುವ 6.ಸಾವಿರ ಮೊತ್ತವನ್ನು 20.ಸಾವಿರಕ್ಕೆ ಹೆಚ್ಚಿಸಬೇಕು ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುವಂತೆ ಕ್ರಮ ಕೈಗೊಂಡು ರೈತರ ಆದಾಯವನ್ನು ಹೆಚ್ಚುಗೊಳಿಸಬೇಕು ಮತ್ತು ಮುಂದಿನ ಕೇಂದ್ರ ಬಜೆಟ್ ನಲ್ಲಿ ರೈತರಿಗಾಗಿ ವಿಶೇಷ ಅನುದಾನವನ್ನು ಘೋಷಣೆ ಮಾಡುವಂತೆ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮಹೇಶ ಹುಜರಾತಿ ಯಾಳಗಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ