ಸಿಎಂ ನೇತೃತ್ವದ ಸಚಿವ ಸಂಪುಟ ಸಭೆ, ಮಹತ್ವದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ

KTN Admin
3 Min Read

ಬೆಂಗಳೂರು : ಮುಂಬರುವ ಅಧಿವೇಶನದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ 2023-24ನೇ ಸಾಲಿನ 38ನೇ ವಾರ್ಷಿಕ ವರದಿ ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಈ ಕುರಿತು ರಾಜ್ಯಪಾಲರಿಗೆ ವರದಿ ರವಾನಿಸಲು ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ಹಲವು ಇಲಾಖೆಗಳಲ್ಲಿನ ಸಿವಿಲ್ ಕಾಮಗಾರಿಗಳ ಹಲವಾರು ಅಂದಾಜುಗಳು ಅಧಿಕ ಹೆಚ್ಚುವರಿಗಳಿಂದ ಪರಿಷ್ಕೃತಗೊಳ್ಳುತ್ತಿರುವ ಕುರಿತು ಅಧ್ಯಯೆನಕ್ಕಾಗಿ ಬಿ ಗುರುಪ್ರಸಾದ್, ನಿವೃತ್ತ ಪ್ರಧಾನ ಅಭಿಯಂತರರು ಇವರ ಅಧ್ಯಕ್ಷತೆಯಲ್ಲಿ ರಚಿಸಲಾದ “ಕಾಮಗಾರಿ ಅಂದಾಜುಗಳ ತಯಾರಿಕಾ ಅಧ್ಯಯನ ಸಮಿತಿ”ಯು ಮಾಡಿರುವ ಶಿಫಾರಸ್ಸುಗಳನ್ನು ಜಾರಿಗೊಳಿಸುವುದು.

ಬೆಳಗಾವಿ ಬಾಗಲಕೋಟೆ ಜಿಲ್ಲೆಯ ಅಥಣಿ ಮತು ಜಿಲೆಯ ಮುಧೋಳ ತಾಲ್ಲೂಕುಗಳಲ್ಲಿ 50 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ಮಾಣ ಕಾಮಗಾರಿಯ 37.98 ಕೋಟಿಗಳ ಅಂದಾಜಿಗೆ ಆಡಳಿತಾತ್ಮಕ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಮುರಗಮಲ್ಲಾ ಗ್ರಾಮದಲ್ಲಿರುವ ಹಜರತ್ ಫಖೀ-ಷಾ-ವಲಿ ಅಮ್ಮಾಪಾನ್ ಬಾವಾಜಾನ್ ದರ್ಗಾದ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾಮಗಾರಿಗಳನ್ನು ರೂ.31.99 ಕೋಟಿಗಳ ಅಂದಾಜು `ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

“ಕರ್ನಾಟಕ ಕೈಗಾರಿಕಾ ನೀತಿ 2025-30″ಕ್ಕೆ 8.02.2025 ರಂದು ಸರ್ಕಾರೆ ಆದೇಶ ಹೊರಡಿಸಿರುವ ಕ್ರಮಕ್ಕೆ, “ಕರ್ನಾಟಕ ಕ್ಲೀನ್ ಮೊಬಿಲಿಟಿ ನೀತಿ 2025-30″ಕ್ಕೆ ದಿನಾಂಕ: 11.02.2025 ರಂದು ಸರ್ಕಾರಿ ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದ ಅವರು, ಸಂಪುಟ ಸಭೆಯಲ್ಲಿ 43 ವಿಷಯಗಳ ಪರಿಶೀಲನೆ ಕುರಿತು ಚರ್ಚಿಸಲಾಗಿದೆ ಎಂದರು.

ಕಾಮಗಾರಿಗಳ ಅಂದಾಜು ತಯಾರಿ ಸಮಿತಿ ರಚನೆ ಮಾಡಲಾಗಿತ್ತು. ಗುರುಪ್ರಸಾದ್ ಅನ್ನೋರ ನೇತೃತ್ವದಲ್ಲಿ ಈ ಸಮಿತಿ ರಚನೆ ಆಗಿತ್ತು. ಇಂದಿನ ಸಂಪುಟ ಸಭೆಯಲ್ಲಿ ಈ ವರದಿ ಪರಿಶೀಲಿಸಿ ಮುಂದುವರೆಯಲು ನಿರ್ಧರಿಸಲಾಗಿದೆ. ಡಿಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಚರ್ಚಿಸಿ ಮುಂದಿನ ಸಚಿವ ಸಂಪುಟಕ್ಕೆ ಸಲ್ಲಿಸಲು ನಿರ್ಧರಿಸಲಾಗಿದೆ ಎಂದರು.

ಹುನಗುಂದದಲ್ಲಿ ಮಕ್ಕಳ ಮತ್ತು ಮಹಿಳಾ ಆಸ್ಪತ್ರೆ ನಿರ್ಮಿಸಲು ಸಂಪುಟದ ಒಪ್ಪಿಗೆ ನೀಡಲಾಗಿದೆ. ಮೈಸೂರು ಮಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಬಿಯಾಂಡ್ ಬೆಂಗಳೂರು ಕ್ಲಸ್ಟರ್ ಯೋಜನೆ ಅಡಿ 70 ಕೋಟಿ ವೆಚ್ಚದ ಸೀಡ್ ಫಂಡ್ ಮೀಸಲಿಡಲು ನಿರ್ಧಾರ ಕೈಗೊಳ್ಳಲಾಗಿದೆ. ಆರಂಭಿಕ ಹಂತದ ಸ್ಟಾರ್ಟಪ್ ಗಳಿಗೆ ಇದರಿಂದ ಸಹಕಾರ ಆಗತ್ತೆ. ಇದಕ್ಕಾಗಿ ಈ ನಿಧಿ ಎತ್ತಿಡಲಾಗುತ್ತಿದೆ. ಇದು ನವೋಧ್ಯಮಗಳಿಗೆ ಬೆಂಬಲಿಸಲು ಮಾಡುತ್ತಿರುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಲು 22 ಕೋಟಿ ಮಂಜೂರು ಮಾಡಲಾಗಿದೆ. ಟೆಂಡರ್ ಮೂಲಕ ಕಟ್ಟಡ ಕಾಮಗಾರಿ ನಡೆಸಲು ಒಪ್ಪಿಗೆ ನೀಡಲಾಗಿದೆ. ಹಳೆಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ. ಸಮಾಜಕಲ್ಯಾಣ ಇಲಾಖೆಯ ವ್ಯಾಪ್ತಿಯ ಹಾಸ್ಟೆಲ್ ಇದಾಗಿದೆ ಎಂದರು.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಲು ಸಂಪುಟ ಸಭೆ ನಿರ್ಣಯ ಕೈಗೊಳ್ಳಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಜಾನ್ಸನ್ ಮಾರ್ಕೆಟ್, ದೊಮ್ಮಲೂರು, ಮಚಲಿಬೆಟ್ಟ, ಹಲಸೂರು ಸೇವಾ ಠಾಣೆಗಳ ಪ್ರದೇಶವಾರು ನೀರು ಸರಬರಾಜು ವ್ಯವಸ್ಥೆಗಳ ಆಧುನೀಕರಣ ಮಾಡಲಾಗುತ್ತಿದೆ. ಒಟ್ಟು 199.00 ಕೋಟಿಗಳ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದರು.

ಇಂದಿನ ಕ್ಯಾಬಿನೆಟ್ ನಲ್ಲಿ ಐದು ಪ್ರಮುಖ ವಿಧೇಯಕಗಳ ಅನುಮೋದನೆ

1. ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕ – 2025 ಕ್ಕೆ ಅನುಮೋದನೆ

2. ಕರ್ನಾಟಕ ಅಧಿಕ ಬಡ್ಡಿ ನಿಷೇಧ (ತಿದ್ದುಪಡಿ) ವಿಧೇಯಕ – 2025

3. ಕರ್ನಾಟಕ ಗಿರಿವಿದಾರರ (ತಿದ್ದುಪಡಿ) ವಿಧೇಯಕ – 2025”

4. ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ವಿಧೇಯಕ, 2025

5. ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) ನಿಯಮಗಳು (ಸಾಮಾನ್ಯ) (ತಿದ್ದುಪಡಿ) 2024 ಸೇರಿದಂತೆ ಒಟ್ಟು ಐದು ವಿಧೇಯಕಕ್ಕೆ ಕ್ಯಾಬಿನೆಟ್‌ ಅನುಮೋದನೆ ನೀಡಲಾಗಿದೆ.
ಬೈಯಪ್ಪನ ಹಳ್ಳಿಯ ಐಓಸಿ ಸರ್ಕಲ್ ನಿಂದ ಐಟಿಸಿ ಫ್ಯಾಕ್ಟರಿ ವರೆಗಿನ ರೈಲ್ವೇ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. 470 ಕೋಟಿ ಮೊತ್ತದ ಕಾಮಗಾರಿಗೆ ಟೆಂಡರ್ ಒಪ್ಪಿಗೆ ಟೆಂಡರ್ ಗೆ ಸೂಚನೆ ನೀಡಲಾಗಿದೆ. 1.5 ಕಿಮೀ ದೂರದ ಕಾಮಗಾರಿ ನಡೆಸಲಾಗುತ್ತಿದೆ ಎಂಬುದಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ