ಸೋಮವಾರಪೇಟೆ ಮೇ 12 :: ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯತಿಯಲ್ಲಿ ಮಹಿಳಾ ಗ್ರಾಮ ಸಭೆಯನ್ನು ಆಯೋಜಿಸಲಾಯಿತು. ಗ್ರಾಮ ಪಂಚಾಯತಿ ವತಿಯಿಂದ ಮಹಿಳೆಯರಿಗೆ ದೊರೆಯುವ ಸೌಲಭ್ಯಗಳು ಹಾಗೂ ಮಹಿಳಾ ದೌರ್ಜನ್ಯ ತಡೆ ಕಾಯ್ದೆಗಳ ಬಗ್ಗೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮಾಹಿತಿ ನೀಡಿದರು.
ಇದೇ ವೇಳೆ ಬೆಟ್ಟದಳ್ಳಿ ಗ್ರಾಮ ಪಂಚಾಯತಿಯನ್ನು ʼಕ್ಷಯರೋಗ ಮುಕ್ತʼ ಗ್ರಾಮ ಪಂಚಾಯತಿಯನ್ನಾಗಿಸಲು ಶ್ರಮಿಸಿದ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.