*ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ*

YDL NEWS
1 Min Read

ಹುಣಸಗಿ : ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಕರ್ನಾಟಕ ರಾಜ್ಯ ನೌಕರರ ಸಂಘ ಬೆಂಗಳೂರು ಅರ್ಜಿ ಅವಾನಿಸಿದ್ದು ಸೂಕ್ತ ಪ್ರಕಟಣೆಗೆ ಒಳಪಡುವಂತೆ ಎಸ್ ಎಸ್ ಎಲ್ ಸಿ ಪಿಯುಸಿಯಲ್ಲಿ ಶೇಕಡ 90% ಕ್ಕಿಂತ ಹೆಚ್ಚು ಅಂಕ ಪಡೆದವರು ಮೇ 31 ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ನೊಂದಾಯಿಸಬೇಕೆಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಅಂಬ್ರೇಶ ಮಾಲಗತ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2024 – 25 ನೇ ಸಾಲಿನಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿ ಎಲ್ಲಿ ಶೇಕಡ 90% ಕ್ಕಿಂತ ಅಧಿಕ ಅಂಕಗಳಿಸಿದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದ್ದು

 

ಅರ್ಹ ಅಭ್ಯರ್ಥಿಗಳು ಆನ್ಲೈನ್ ವಿಳಾಸ https:// ks-geanews.blogspot.com ಮೂಲಕ ಅರ್ಜಿ ಸಲ್ಲಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದರು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಂದೆ – ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಸ್ವಯಂ ನೌಕರರ ಆಗಿರಬೇಕು ಸಂಘವು ನಿಗದಿ ಪಡಿಸಿದ ನಮೂನೆಯಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ಸಂಬಂಧಿಸಿದ ತಾಲೂಕ ಶಾಖೆಯ ನೌಕರರ ಸಂಘದ ಅಧ್ಯಕ್ಷರ ರುಜು ಮೋಹರಿನೊಂದಿಗೆ ದೃಢೀಕರಿಸಿ ಆನ್ಲೈನ್ ನಲ್ಲಿ ಅಪ್ಲೋಡ್ ಮಾಡಿಕೊಳ್ಳಬೇಕು. ಹಾಗೂ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಾಲೂಕ ಅಧ್ಯಕ್ಷರಾದ ಅಂಬ್ರೇಶ ಮಾಲಗತ್ತಿ ಅವರು ಮನವಿ ಮಾಡಿದರು.

Share This Article