ಕೆಂಭಾವಿ:- ಕನ್ನಡ ಹುಟ್ಟಿದ್ದು ತಮಿಳಿನಿಂದ ಎನ್ನುವ ಹೇಳಿಕೆ ನೀಡಿರುವ ತಮಿಳು ನಟ ಕಮಲಹಾಸನ್ ಕೂಡಲೇ ಕನ್ನಡಿಗರ ಕ್ಷಮೆ ಕೇಳುವಂತೆ ಕೆಂಭಾವಿ ವಲಯ ಕಸಾಪ ಅಧ್ಯಕ್ಷರಾದ ಮಡಿವಾಳಪ್ಪ ಪಾಟೀಲ್ ಹೆಗ್ಗಣದೊಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಬ್ಬ ಸ್ಟಾರ್ ನಟನಾಗಿ ಬೆಳೆಯುವುದಕ್ಕೆ ಕೇವಲ ಒಂದು ಭಾಷೆ ಕಾರಣವಾಗಿರುವುದಿಲ್ಲ ಎಂಬುದನ್ನು ಕಮಲಹಾಸನ ಮನದಟ್ಟು ಮಾಡಿಕೊಳ್ಳಬೇಕು.
ಅವರ ಹೇಳಿಕೆ 6 ಕೋಟಿ ಕನ್ನಡ ಅಭಿಮಾನಿಗಳಿಗೆ ತುಂಬಾ ನೋವುಂಟು ಮಾಡಿದೆ ತಮ್ಮ ರಾಜಕೀಯ ಬೆಳೆ ಬೇಯಿಸಿಕೊಳ್ಳುವ ಉದ್ದೇಶದಿಂದ ಹಾಗೂ ತಮಿಳು ಜನರ ಮತದ ಮೇಲೆ ಕಣ್ಣಿಟ್ಟಿರುವ ಇವರು ತಮ್ಮ ಹೊಸ ಚಲನಚಿತ್ರ ದಗ್ ಲೈಫ್ ಧ್ವನಿ ಸರಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಅಸಂಬಂಧ ಹೇಳಿಕೆ ಆರು ಕೋಟಿ ಕನ್ನಡಿಗರ ಆಕೋಶಕ್ಕೆ ಕಾರಣವಾಗಿದೆ ನಟ ಕಮಲ ಹಾಸನ ಇವರು ಹೇಳಿಕೆಯನ್ನು ಕೂಡಲೇ ಹಿಂಪಡೆದು ಕನ್ನಡಿಗರ ಕ್ಷಮೆ ಕೇಳಬೇಕು,
ಇಲ್ಲದೆ ಹೋದರೆ ಜೂನ್ 6 ರಂದು ಅವರ ದಗ್ ಲೈಫ್ ಚಿತ್ರವನ್ನು ಕರ್ನಾಟಕದ ಯಾವುದೇ ಚಿತ್ರಮಂದಿರದ ಮಂದಿರದಲ್ಲಿ ಬಿಡುಗಡೆ ಮಾಡಲು ಕರ್ನಾಟಕ ರಕ್ಷಣಾ ವೇದಿಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಕೆಂಭಾವಿ ವಲಯ ಕಸಾಪ ಅಧ್ಯಕ್ಷರಾದ ಮಡಿವಾಳಪ್ಪ ಪಾಟೀಲ್ ಹೆಗ್ಗಣದೊಡ್ಡಿ ಎಚ್ಚರಿಕೆ ನೀಡಿದ್ದಾರೆ