ಕೆಂಭಾವಿ: ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ
ಜು. 18ರಂದು ಜಿಲ್ಲಾ ಮಟ್ಟದ ಬೃಹತ್ ಸಮಾವೇಶ ನಡೆಯಲಿದ್ದು ಇದೇ ಸಂದರ್ಭದಲ್ಲಿ ಮತಕ್ಷೇತ್ರದ ವಿವಿಧ ಪದಾಧಿಕಾರಿಗಳ ಅಧಿಕಾರ ಪದಗ್ರಹಣ ಹಾಗೂ ಪುರಸಭೆಯ ಬಿಜೆಪಿ ಪಕ್ಷದ ಒಂಭತ್ತು ಜನ ಸದಸ್ಯರ ಪಕ್ಷ ಸೇರ್ಪಡೆ ಸಮಾರಂಭ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಹೊಸಮನಿ ಯಾಳಗಿ ತಿಳಿಸಿದರು.
ಅಂದು ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ, ಸಂಸದ ಜಿ. ಕುಮಾರ ನಾಯಕ, ಪಕ್ಷದ ಜಿಲ್ಲಾಧ್ಯಕ್ಷ ಬಸರೆಡ್ಡಿ ಪಾಟೀಲ ಅನಪೂರ, ಶಹಾಪೂರ ಬ್ಲಾಕ್ ಅಧ್ಯಕ್ಷ ಶಿವಮಹಾಂತ ಚಂದಾಪೂರ, ಜಿಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಪೊಲೀಸ್ ಪಾಟೀಲ ಸೇರಿದಂತೆ ಹಲವರು ಭಾಗವಹಿಸಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸುವಂತೆ ಅವರು ಮನವಿ ಮಾಡಿದ್ದಾರೆ.