ಬೆಂಗಳೂರು : ಜುಲೈ -31
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ
ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ . ಎಂದು
ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನ ಹಿಲ್ಟನ್ ಹೋಟೆಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.
ಹಾಗಾಗಿ ಅವರು ಆಗಸ್ಟ್ 4 ರಂದು ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದರು.