ಇ-ಸ್ವತ್ತು ಕಾರ್ಯಾಚರಣೆಯಲ್ಲಿ ಎದುರಾಗಬಹುದಾದ ಸವಾಲುಗಳು

YDL NEWS
1 Min Read

ಹಾಗೂ ತಾಂತ್ರಿಕ ಸಮಸ್ಯೆಗಳ ನಿವಾರಣೆಗೆ ಅಧಿಕಾರಿಗಳೊಂದಿಗೆ

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸಮಾಲೋಚನೆ

 

 

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ, 2025, ದಿನಾಂಕ 07.04.2025ರ ಪ್ರಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಇ-ಸ್ವತ್ತು ಕಾರ್ಯಕ್ರಮವನ್ನು ಪ್ರಾರಂಭಿಸಲಿರುವ ಹಿನ್ನೆಲೆಯಲ್ಲಿ ಎದುರಾಗಬಹುದಾದ ಸವಾಲುಗಳು

ಹಾಗೂ ತಾಂತ್ರಿಕ ಸಮಸ್ಯೆಗಳ ನಿವಾರಣೆಗೆ ಅಧಿಕಾರಿಗಳೊಂದಿಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆಗಳ ಸಚಿವ ಪ್ರಿಯಾಂಕ್ ಖರ್ಗೆ ಸಮಾಲೋಚನೆ ನಡೆಸಿದರಲ್ಲದೆ ಕೆಲವಾರು ನಿವಾರೋಣಪಾಯಗಳನ್ನು ಸೂಚಿಸಿದರು.

 

 

ಇ-ಸ್ವತ್ತು ಮಂಜೂರಾತಿ ವ್ಯವಸ್ಥೆಯನ್ನು ಬೇಡಿಕೆ ಆಧಾರಿತ ವಿಧಾನದಿಂದ ಅಭಿಯಾನ ಆಧಾರಿತ ಮಾದರಿಗೆ ಪರಿವರ್ತನೆಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಈ ಸಂಬಂಧದಲ್ಲಿ ನಿನ್ನೆ ಹಾಗೂ ಇಂದು ಸಚಿವರು ಸಭೆ ನಡೆಇಸಿದರು. ರಾಷ್ಟ್ರೀಯ ಮಾಹಿತಿ ಕೇಂದ್ರದ (NIC) ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಇಲಾಖೆಯ ದಾಟಾ ಸೆಂಟರ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಎರಡನೆಯ ದಿನವಾದ ಇಂದು ದೀರ್ಘ ಚರ್ಚೆ ನಡೆಸಿದರು.

 

ಇ-ಸ್ವತ್ತು ರೂಪಾಂತರದ ಭಾಗವಾಗಿ ಅರ್ಜಿಯ ಕಾರ್ಯಾಚರಣೆಯ ಸಿದ್ಧತೆಯನ್ನು ಸಚಿವರು ಪರಿಶೀಲಿಸಿದರಲ್ಲದೆ ಕಾರ್ಯಕ್ರಮದ ಸುಗಮ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವಲ್ಲಿ ಎದುರಾಗಬಹುದಾದ ತಾಂತ್ರಿಕ ಸವಾಲುಗಳನ್ನು ಎದುರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.

 

 

ಇಲಾಖೆಯು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತ್ಗಳ ತೆರಿಗೆಗಳು, ದರಗಳು ಮತ್ತು ಶುಲ್ಕಗಳು) ನಿಯಮಗಳು, 2025ನ್ನು ಸಾರ್ವಜನಿಕರಿಗೆ ತಲುಪಿಸುವ ಪ್ರಕ್ರಿಯೆಯಲ್ಲಿದೆ. ಈ ನಿಯಮಗಳು ಪಂಚತಂತ್ರ 2.0 ವೇದಿಕೆಯಲ್ಲಿ ಲಭ್ಯವಿರುವ 97 ಲಕ್ಷಕ್ಕೂ ಹೆಚ್ಚು ಡಿಜಿಟಲೀಕೃತ ಆಸ್ತಿಗಳಿಗೆ ಇ-ಖಾತಾಗಳನ್ನು ಆನ್ಲೈನ್ನಲ್ಲಿ ನೀಡಲು ಅನುಕೂಲವಾಗುತ್ತವೆ, ಇದರಿಂದಾಗಿ ನಾಗರಿಕರು ಖಾತಾ ಸೇವೆಗಳಿಗಾಗಿ ಗ್ರಾಮ ಪಂಚಾಯತ್ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವನ್ನು ನಿವಾರಿಸುತ್ತದೆ ಎಂದೂ ಈ ಸಂದರ್ಭದಲ್ಲಿ ಸಚಿವರು ಹೇಳಿದರು.

 

ಸಭೆಯಲ್ಲಿ ಕಿಯೊನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಉಮಾ ಮಹೇಶ್ವರನ್, ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

Share This Article