ಉಡುಪಿ : ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಸುರೇಶ್ ನಾಯಕ್ ಕುಯಿಲಾಡಿ ಅಧ್ಯಕ್ಷತೆಯಲ್ಲಿ ಜರಗಿದ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಉಡುಪಿ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿದರು.
ಸಭೆಯಲ್ಲಿ ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ವಿಭಾಗ ಪ್ರಭಾರಿ ಶ್ರೀ ಉದಯ ಕುಮಾರ್ ಶೆಟ್ಟಿ ಕಿದಿಯೂರು, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ ಹಾಗೂ ಚುನಾವಣಾ ನಿರ್ವಹಣಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.