ನಿಗದಿತ ದರದಲ್ಲೆ ಹಾಲು ಕರಿದಿಸಲು ಖಡಕ ಸೂಚನೆ ನೀಡಿದ ಮುಖ್ಯಮಂತ್ರಿಗಳು

KTN Admin
0 Min Read

ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಬಮೂಲ್ ದರ ಕಡಿತ ಮಾಡಿದೆ ಎಂಬ ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದ್ದಾರೆ.

ಕರ್ನಾಟಕ ಹಾಲು ಮಹಾ ಮಂಡಳಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ ಸಿಎಂ, ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು.

ದರ ಕಡಿತ ಮಾಡಿದರೆ ರೈತರಿಗೆ ತೊಂದರೆಯಾಗುತ್ತದೆ. ಈ ಅಂಶವನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ತರಾಟೆಗೆ ತೆಗೆದುಕೊಂಡರು.

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ