ಶ್ರೀಕೃಷ್ಣ ಜನ್ಮಾಷ್ಟಮಿಯು ಹಿಂದೂಗಳು ಆಚರಿಸುವ ಅತ್ಯಂತ ಪವಿತ್ರ ಹಬ್ಬಗಳಲ್ಲಿ ಒಂದಾಗಿದೆ. ಇದನ್ನು ಕೃಷ್ಣಾಷ್ಟಮಿ, ಜನ್ಮಾಷ್ಟಮಿ, ಗೋಕುಲಾಷ್ಟಮಿ, ಶ್ರೀಕೃಷ್ಣ ಜಯಂತಿ ಎಂದು ವಿವಿಧ ಹೆಸರುಗಳಿಂದ ಕರೆಯುತ್ತಾರೆ. ಭಗವಾನ್ ಕೃಷ್ಣನಿಗೆ ಸಮರ್ಪಿತವಾದ ಈ ದಿನದಂದು ಎಲ್ಲಾ ಭಕ್ತರು ಕೃಷ್ಣನನ್ನು ಅತ್ಯಂತ ಭಕ್ತಿಯಿಂದ ಪೂಜಿಸುತ್ತಾರೆ.