ಮೂಲ ಸೌಕರ್ಯಗಳಿಂದ ವಂಚಿತವಾದ ಹಸರಗುಂಡಗಿ ಗ್ರಾಮ ಪಂಚಾಯಿತಿ.

Ravikumar Badiger
1 Min Read

ಮೂಲ ಸೌಕರ್ಯಗಳಿಂದ ವಂಚಿತವಾದ ಹಸರಗುಂಡಗಿ ಗ್ರಾಮ ಪಂಚಾಯಿತಿ.

ಕಲಬುರ್ಗಿ ಜಿಲ್ಲೆಯ ಅಫಜಲಪೂರ ತಾಲ್ಲೂಕಿನ ಹಸರಗುಂಡಗಿ ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ರಸ್ತೆಯ ಮೇಲೆ ಚರಂಡಿ ನೀರು ಹರಿದು ಗಬ್ಬು ನಾರುತ್ತಿರುವುದು ಕಂಡು ಬರುತ್ತದೆ ಮತ್ತು ಪಂಚಾಯಿತಿಯ ಪಕ್ಕದಲ್ಲೇ ರಾಶಿ ಗಟ್ಟಲೆ ಕಸದ ರಾಶಿ ಬಿದ್ದಿರುವುದು ಕಂಡುಬರುತ್ತದೆ. ಹೀಗಾಗಿ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮೂಲ ಸೌಕರ್ಯಗಳಿಂದ ಗ್ರಾಮ ವಂಚಿತವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಅದೇ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯು ಕೂಡ ಇಲ್ಲ ನೀರಿಗಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಪಂಚಾಯಿತಿ ಸರ್ವ ಸದಸ್ಯರು ಗ್ರಾಮದ ಅಭಿವೃದ್ಧಿ ಕಡೆ ಗಮನ ಹರಿಸಬೇಕು ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡರು.

Share This Article