ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ರಿಷಿ ದಂಪತಿ
ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಭಾನುವಾರ ಬೆಳಗ್ಗೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಎರಡು ದಿನಗಳ G20 ಶೃಂಗಸಭೆಯಲ್ಲಿ ಭಾಗವಹಿಸಲು ಸುನಕ್ ಅವರು ದೆಹಲಿಗೆ ಆಗಮಿಸಿದ್ದು, ಅಲ್ಲಿ ವಿಶ್ವ ನಾಯಕರ ಜೊತೆ ವಿಶ್ವದ ಕೆಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.