- ಭಾರತ-ಪಾಕಿಸ್ತಾನ್ ನಡುವಣ ಸೂಪರ್ ಫೋರ್ ಹಂತದ 3ನೇ ಪಂದ್ಯವನ್ನು ಮಳೆಯ ಕಾರಣ ಸೋಮವಾರಕ್ಕೆ ಮುಂದೂಡಲಾಗಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ಇಂದು ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು.
ಭಾರತ-ಪಾಕಿಸ್ತಾನ್ ಪಂದ್ಯ ಸೋಮವಾರಕ್ಕೆ ಮುಂದೂಡಿಕೆ.
