ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು- ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ

KTN Admin
1 Min Read


ಬೆಂಗಳೂರು, ಡಿಸೆಂಬರ್‌ 29-
ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ವಿಳಂಬವಾಗುತ್ತಿರುವ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಕೂಡಲೇ ಕ್ರಮ ವಹಿಸಿ, ಎಲ್ಲ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿ, ಲೋಕಾಯುಕ್ತಕ್ಕೆ ಕಳುಹಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.
ವಿವಿಧ ಪ್ರಕರಣಗಳಲ್ಲಿ ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಧೋರಣೆ ಸಲ್ಲದು. ಇದರಿಂದ ಜನತೆಗೆ ತಪ್ಪು ಸಂದೇಶ ಹೋಗಬಾರದು. ಆದ್ದರಿಂದ ತ್ವರಿತ ತೀರ್ಮಾನ ಕೈಗೊಂಡು ಲೋಕಾಯುಕ್ತರಿಗೆ ಆದೇಶಗಳನ್ನು ಕಳುಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ