ಸಕಲ ಸರ್ಕಾರಿ ಗೌರವಗಳೊಂದಿಗೆ ಸುರಪುರ ಶಾಸಕ ರಾಜಾ ವೆಂಕಟಪ್ಪ ಅಂತ್ಯಕ್ರಿಯೆ: ಸರ್ಕಾರ ಆದೇಶ

KTN Admin
0 Min Read

ಹೃದಯಾಘಾತದಿಂದ ನಿಧನರಾದ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ಸ್ವಗ್ರಾಮದಲ್ಲಿ ನಡೆಸಲಾಗುತ್ತಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಯನ್ನು ನೆರವೇರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರಾದಂತ ರಾಜಾ ವೆಂಕಟಪ್ಪ ನಾಯಕ್ ಅವರು ಇಂದು ನಿಧನರಾಗಿರುತ್ತಾರೆ.ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರು ಆಗಿದ್ದ ಅವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರೆವೇರಿಸಲು ಆದೇಶಿಸಿದ್ದಾರೆ.

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ