ಶಹಾಪುರ: ಮಹಾರಾಷ್ಟ್ರ ಚುನಾವಣೆ ಬಳಿಕ ರಾಜ್ಯ ಸರ್ಕಾರ ನೀಡಿರುವ ಪಂಚ ಗ್ಯಾರಂಟಿಗಳು ಬಂದ್ ಆಗುತ್ತವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಪಂಚ ಗಾರಂಟಿ ಅನುಷ್ಠಾನ ಸಮಿತಿ ಶಹಾಪುರ ತಾಲ್ಲೂಕ ಅಧ್ಯಕ್ಷರಾದ ಕೃಷ್ಣಪ್ಪಗೌಡ ಮಾಲಿಪಾಟೀಲ್ (ಗೌಡಪ್ಪ ಗೌಡ)ತಿರುಗೇಟು ನೀಡಿದ್ದಾರೆ. ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿಗಳು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಕೊಟ್ಟ ಮಾತಿಗೆ ತಪ್ಪುವುದಿಲ್ಲ ಎಂದು ರಾಜ್ಯದ ಜನತೆಗೆ ಭರವಸೆ ನೀಡಿದ್ದಾರೆ. ಆದರೆ ಬಿಜೆಪಿಯ ಕೆಲ ನಾಯಕರು ಕಾಂಗ್ರೆಸ್ ಪಕ್ಷದ ಏಳಿಗೆಯನ್ನು ಸಹಿಸದೆ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಸಾರ್ವಜನಿಕರ ದಾರಿ ತಪ್ಪಿಸುತ್ತಿರುವುದು ಸರಿಯಲ್ಲ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣವಾಗಿ ಬೆಂಬಲಿಸಿ ಐದು ವರ್ಷಗಳ ಆಡಳಿತ ಮಾಡಲು ಆಶೀರ್ವದಿಸಿದ್ದಾರೆ. ನಮ್ಮ ಸರಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತದೆ ಜನರಲ್ಲಿ ಯಾವುದೇ ಆತಂಕ ಬೇಡ ಈಗ ನಡೆಯಲಿರುವ ಉಪಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಪಕ್ಷದವರು ಹತಾಶರಾಗಿ ಪಂಚ ಗ್ಯಾರಂಟಿಗಳು ಬಂದು ಮಾಡುತ್ತಾರೆ ಎಂದು ಸಾರ್ವಜನಿಕರಲ್ಲಿ ಸುಳ್ಳು ವದಂತಿ ಸುಳ್ಳು ಪ್ರಚಾರ ಹಬ್ಬಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಇನ್ನು ಮುಂದೆ ಸಾರ್ವಜನಿಕರು ಯಾವುದೇ ಕಾರಣಕ್ಕೂ ಸುಳ್ಳು ವದಂತಿಗಳಿಗೆ ಕಿವಿಗೂಡಬೇಡಿ ಎಂದು ಪಂಚ ಗ್ಯಾರೆಂಟಿ ಅನುಷ್ಠಾನ ಸಮಿತಿ ಶಹಾಪುರ ತಾಲ್ಲೂಕ ಅಧ್ಯಕ್ಷರಾದ ಕೃಷ್ಣಪ್ಪಗೌಡ ಮಾಲಿಪಾಟೀಲ್ (ಗೌಡಪ್ಪ ಗೌಡ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ