ಕವಿತಾಳ | ಹಣ ದುರ್ಬಳಕೆ: ಪಿಡಿಒ ಅಮಾನತು

KTN Admin
1 Min Read

ಕವಿತಾಳ | ಹಣ ದುರ್ಬಳಕೆ: ಪಿಡಿಒ ಅಮಾನತು

Udayavani News

ಕವಿತಾಳ (ರಾಯಚೂರು ಜಿಲ್ಲೆ): ಹಣ ದುರ್ಬಳಕೆ ಆರೋಪದಡಿ ಅಮೀನಗಡ ಗ್ರಾಮ ಪಂಚಾಯಿತಿಯ ಪ್ರಭಾರ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮಪ್ಪ ನಡಗೇರಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ಪಾಂಡ್ವೆ ಅಮಾನತು ಮಾಡಿದ್ದಾರೆ.

ಸಿಬ್ಬಂದಿ ವೇತನ ಮತ್ತು ರಸ್ತೆ ದುರಸ್ತಿಗೆ ಹಣ ಪಾವತಿ ಮಾಡುವುದಾಗಿ ಹೇಳಿ ತನ್ನ ಡಿಜಿಟಲ್‌ ಸಹಿ ಪಡೆದು ₹5 ಲಕ್ಷ ಡ್ರಾ ಮಾಡಿಕೊಂಡು ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಅಧ್ಯಕ್ಷೆ ಬಸಲಿಂಗಮ್ಮ ದೂರು ನೀಡಿದ್ದರು.
ಈ ಹಿಂದೆ ಹಾಲಾಪುರ ಗ್ರಾಮ ಪಂಚಾಯಿತಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೇಳೆಯೂ ರಾಮಪ್ಪ ಅವರ ವಿರುದ್ಧ ಸಾರ್ವಜನಿಕರಿಂದ ದೂರು ಬಂದಿದ್ದವು. ಆ ದೂರುಗಳಿಗೂ ಸಮರ್ಪಕ ಉತ್ತರ ನೀಡದ ಕಾರಣ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಆದೇಶದಲ್ಲಿ ತಿಳಿಸಿದ್ದಾರೆ.

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ