ಶ್ರೀ ಮಹಾಂತ ಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಮೇಶ ಭೂಸನೂರ ಸುದ್ದಿ ವಾಹಿನಿ ಲೋಕಾರ್ಪಣೆ ಮಾಡಿದರು.
ಬಳಿಕ ಅವರು ಮಾತನಾಡಿ, ಸುದ್ದಿ ಮಾಧ್ಯಮಗಳು ಯಾವುದೇ ಪಕ್ಷಕ್ಕೆ ಸೀಮಿತವಲ್ಲ, ಸಾರ್ವಜನಿಕ ಜೀವನ ಆಡಳಿತ ಪಾರದರ್ಶಕವಾಗಿ ಇರಬೇಕಾದರೆ ಇಂತಹ ಸುದ್ದಿ ಮಾಧ್ಯಮಗಳ ಮುಖ್ಯ. ಇನ್ನು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿಯಬೇಕೆಂದರೆ ಸುದ್ದಿ ಮಾಧ್ಯಮಗಳ ಪಾತ್ರ ಮುಖ್ಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಶತಾಯುಷಿ ಅನಸರಸಾಬ ಖಾಸೀಂ ಸಾಬ್ ಕುದುರಗುಂಡು ಇವರಿಗೆ ವಿಶೇಷವಾಗಿ ಸನ್ಮಾನಿಸಲಾಯಿತು. ನೇರ ನುಡಿ ವಾಹಿನಿ ಸಂಪಾದಕ ಇಸ್ಮಾಯಿಲ್ ಎಮ್ ಶೇಖ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಯಾಗಿ ಸಿಂದಗಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ದೇವರಹಿಪ್ಪರಗಿ ತಹಶೀಲ್ದಾರ ಪ್ರಕಾಶ ಸಿಂದಗಿ, ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ರಾಜ್ಯಾಧ್ಯಕ್ಷ ಚನ್ನಯ್ಯ ವಸ್ತಂದ, ಸುದ್ದಿ ವಾಹಿನಿಯ ನಿರೂಪಕ ಶಾಂತವೀರ ಬಿರಾದಾರ, ಗುಮ್ಮಟ ನಗರಿ ದಿನಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಇರಫಾನ ಶೇಖ್, ಕಾನಿಪ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆನಂದ ಶಾಬಾದಿ, ಕಾನಿಪ ಧ್ವನಿ ಸಂಘದ ಪಂಡಿತ ಯಂಪೂರೆ, ಎಂ.ಎ. ಖತಿಬ, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ವೈ.ಸಿ. ಮಣೂರ, ಟಿಪ್ಪು ಕ್ರಾಂತಿ ಸೇನೆಯ ಸಂಸ್ಥಾಪಕ ದಸ್ತಗೀರ ಮುಲ್ಲಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ ಎನ್ ಎಮ್ ನದಾಫ್