ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ತಳವಾ‌ರ್ ಸಮಾಜದ ಪ್ರತಿಭಟನೆ

KTN Admin
1 Min Read

ಕಲಬುರ್ಗಿ, ಫೆ.20- ಮುಂಬರುವ ಜಿಲ್ಲಾ ಪಂಚಾ ಯಿತಿ ಮತ್ತು ತಾಲ್ಲೂಕು ಪಂ ಚಾಯಿತಿ ಚುನಾವಣೆಗಳಲ್ಲಿ ಜಿಲ್ಲೆಯ ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಕ್ಕೆ ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಗೆ ಮಾಡುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ತಳವಾರ್ ಸಮಾಜ ಸಂಘ ರಾಜ್ಯ ಸಮಿತಿಯ ಸಂತೋಷ್ ತಳವಾ‌ರ್, ಹುಲಿಕಂಠರಾಯ್, ಗುರುನಾಥ್ ಹಾವ ನೂರ್, ನಿಂಗಪ್ಪ ದೇವಣಗಾಂವ್ ಅವರು ಗುರುವಾರ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಸಂಬಂಧಿಸಿದಂತೆ ಈಗಾಗಲೇ ಚುನಾವಣಾ ಆಯೋಗ ಪ್ರಕಟಿಸಿರುವ ಮೀಸಲಾತಿ ಪಟ್ಟಿಯಲ್ಲಿ ಪರಿಶಿಷ್ಟ ಪಂಗಡದವರಿಗೆ ಜಿಲ್ಲೆಯಲ್ಲಿ ಕೇವಲ 2 ಸ್ಥಾನವನ್ನು ಮಾತ್ರ ಮೀಸಲಿಟ್ಟಿದ್ದು, ಆದರೆ ಜಿಲ್ಲೆಯಲ್ಲಿ ನಮ್ಮ ಪರಿಶಿಷ್ಟ ಪಂಗಡದ ಜನಸಂಖ್ಯೆ ಸುಮಾರು 3 ಲಕ್ಷ ಜನರಿದ್ದು.

ಇಷ್ಟೊಂದು ಜನಸಂಖ್ಯೆಗಳಿರುವ ಹಿಂದುಳಿದ ವರ್ಗದ ಜನರಿಗೆ ರಾಜಕೀಯವಾಗಿ ಯಾವುದೇ ಪ್ರಾಶಸ್ತ್ರ ಇದುವರೆಗೂ ಯಾವುದೇ ಸರ್ಕಾರ ಮತ್ತು ಅಧಿಕಾರಿಗಳು ನೀಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಇದುವರೆಗೂ ಸಮುದಾಯ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದು, ನಮ್ಮ ಸಮಾಜದ ಸಮಸ್ಯೆಗಳನ್ನು ಎತ್ತಿ ಹಿಡಿಯುವ ನಾಯಕರು ಚುನಾವಣೆಗಳಲ್ಲಿ ಸ್ಪರ್ಧಿಸಿ ಆಯ್ಕೆಯಾದರೆ ಮಾತ್ರ ನಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಹಾಗಾಗಿ ಜಿಲ್ಲೆಯಲ್ಲಿರುವ ನಮ್ಮ ಪರಿಶಿಷ್ಟ ಪಂಗಡದ ಜನಸಂಖ್ಯೆಯನ್ನು ಪರಿಗಣಿಸಿ ಮುಂಬರುವ ಜಿಲ್ಲಾ ಪಂಚಾಯಿತಿ ಜಿಲ್ಲೆಯ ಪರಿಶಿಷ್ಟ ಪಂಗಡ (ಎಸ್.ಟಿ) ಸಮುದಾಯಕ್ಕೆ ಕನಿಷ್ಠ 8-10 ಸ್ಥಾನಗಳನ್ನು, ಹಾಗೂ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಕನಿಷ್ಠ 20-25 ಸ್ಥಾನಗಳನ್ನು ನಮ್ಮ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಅವರು ಒತ್ತಾಯಿಸಿದರು.

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ