ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ: ಸದುಪಯೋಗ ಪಡಿಸಿಕೊಳ್ಳಲು ಸಿಎಂ ಕರೆ

KTN Admin
1 Min Read

ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ: ಸಿಎಂ ಘೋಷಣೆ

ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ: ಸಿಎಂ

ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಿ: ಸಿಎಂ 

ಬೆಂಗಳೂರು ಫೆ 27: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ. ಇದನ್ನು ಸಾಹಿತ್ಯಾಸಕ್ತರು ಸದುಪಯೋಗ ಪಡಿಸಿಕೊಳ್ಳಬೇಕು.
ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು‌ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.

ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ.
ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಿ.
ಮಕ್ಕಳು ಮೊಬೈಲ್ ಮತ್ತು ಡಿಜಿಟಲ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಹವ್ಯಾಸ, ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು.

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ