ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಂದ ರಾಷ್ಟ್ರೀಯ ವಿಜ್ಞಾನ ಪ್ರತಿಜ್ಞಾವಿಧಿ ಬೋಧನೆ

KTN Admin
1 Min Read

ಬೆಂಗಳೂರು, ಫೆಬ್ರವರಿ 28 :-ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ರಾಷ್ಟ್ರೀಯ ವಿಜ್ಞಾನ ದಿನದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಪ್ರತಿಜ್ಞಾವಿಧಿಯನ್ನು ಬೋಧಿಸಿದ ಬಳಿಕ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ವೈಜ್ಞಾನಿಕ ಮನೋಭಾವನೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಪ್ರತಿ ದಿನದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ರಾಷ್ಟ್ರೀಯ ವಿಜ್ಞಾನ ದಿನದ ಪ್ರತಿಜ್ಞಾನ ವಿಧಿಯಲ್ಲಿ ತಿಳಿಸಿರುವಂತೆ, ನಾವು ಪ್ರಶ್ನೆಯನ್ನು ಮಾಡದೇ ಯಾವುದೇ ತರ್ಕವನ್ನು ಒಪ್ಪಬಾರದು ಹಾಗೂ ಸಂವಿಧಾನದ ಮೂಲಭೂತ ಕರ್ತವ್ಯದ ಆಶಯದಂತೆ ಮೌಢ್ಯತೆ ಮತ್ತು ಅಂಧಕಾರವನ್ನು ನಿರ್ಮೂಲನೆ ಮಾಡಿ ಜೀವ ಜಗತ್ತಿಗೆ ಪೂರಕವಾದ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸತ್ಯವತಿ ಸೇರಿದಂತೆ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಉಪಸ್ಥಿತರಿದ್ದರು.

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ