ಪಿಯು ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ

YDL NEWS
1 Min Read

ಕಲಬುರಗಿ: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಮಾ. 5ರಂದು ರಾಜ್ಯಶಾಸ್ತ್ರ ಪರೀಕ್ಷೆ ನಡೆದಿತ್ತು. ಆದರೆ ಕಲಬುರಗಿ ಜಿಲ್ಲೆಯ ಮಿಲಿಂದ್ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿನಿ ಬದಲಿಗೆ ಕಾಂಗ್ರೆಸ್ ಕಾರ್ಯಕರ್ತೆ ಪರೀಕ್ಷೆ ಬರೆದಿದ್ದಾರೆ.

ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಪರೀಕ್ಷೆ ಬರೆದಿದ್ದಾರೆ.

 

ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆ ದಿನವೇ ತಾಯಿ ನಿಧನ; ಆಶೀರ್ವಾದ ಪಡೆದು ತೆರಳಿದ ಮಗ

 

ದಲಿತ ಸೇನೆ ಕಾರ್ಯಕರ್ತರು ಕಾಲೇಜಿಗೆ ತೆರಳಿ ಅಕ್ರಮವನ್ನು ಪ್ರಶ್ನಿಸಿದಾಗ ಬದಲಿ ಅಭ್ಯರ್ಥಿ ಪರೀಕ್ಷೆ ಬರೆದಿರುವುದು ಬೆಳಕಿಗೆ ಬಂದಿದೆ. ಸದ್ಯ ಮಿಲಿಂದ್ ಶಾಲೆಯ ಪ್ರಾಂಶುಪಾಲರು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಸಂಪೂರ್ಣಾ ಪಾಟೀಲ್‌ಳನ್ನು ಬಂಧಿಸಿದ್ದಾರೆ.

Share This Article