ಕಲಬುರ್ಗಿ ಜಿಲ್ಲೆಯಲ್ಲಿ ನಿತ್ಯ ಹರಿಯುತ್ತಿದೆ ನೆತ್ತರು : ಬೀಳುತ್ತಿರು ಹೆಣೆಗಳಗೆ ಹೊಣೆ ಯಾರು.?

KTN Admin
1 Min Read

 

 

ಆಳಂದದಲ್ಲಿ ಮಾರಕಾಸ್ತ್ರಗಳಿಂದ ಯುವಕನ ಭೀಕರ ಹತ್ಯೆ: ಸಹೋದರ ಗಂಭೀರವಾಗಿ ಗಾಯಗೊಂಡ ಘಟನೆ

 

ಕಲಬುರಗಿ, ಜೂನ್ – ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸಾವಳೇಶ್ವರ ಕ್ರಾಸ್ ಬಳಿ ತಡರಾತ್ರಿ ಸಂಭವಿಸಿದ ಭೀಕರ ಹತ್ಯೆಯೊಂದು ಸುತ್ತಮುತ್ತಲ ಭಾಗಗಳಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ 27 ವರ್ಷದ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಿನ್ನೆ (ಮಂಗಳವಾರ) ರಾತ್ರಿ 2 ಗಂಟೆಯ ಸುಮಾರಿಗೆ ನಡೆದಿದೆ.ಕಲಬುರ್ಗಿ ಜಿಲ್ಲೆಯಲ್ಲಿ ನಿತ್ಯ ಹರಿಯುತ್ತಿದೆ ನೆತ್ತರಿಗೆ ಬೀಳುತ್ತಿರುವ ಹೆಣೆಗಳಗೆ ಹೊಣೆ ಯಾರು ಎಂಬ ಪ್ರಶ್ನೆ ಸಾರ್ವಜನಿಕ ಮಾತಾಡಿಕೋಳತ್ತಿದ್ದಾರೆ ಕಲಬುರಗಿ ಜಿಲ್ಲೆಯಲ್ಲಿ ನಿತ್ಯವು ಒಂದಲಾ ಒಂದು ಹತ್ಯೆಯ ಸುದ್ದಿಗಳ ವರದಿ ಆಗುತ್ತಲ್ಲೆ ಇವೆ.

ಮೃತನನ್ನು ಧುತ್ತರಗಾಂವ್‌ನ ನಿವಾಸಿ ಸುಧಾಕ‌ರ್ ಮದಗುಣಕಿ ಎಂದು ಗುರುತಿಸಲಾಗಿದೆ. ಘಟನೆಯಾಗುವ ಸಂದರ್ಭದಲ್ಲಿ ಸುಧಾಕರ್ ತನ್ನ ಸಹೋದರ ಸಿದ್ರಾಮ್ ಜೊತೆಗೆ ಸ್ಥಳೀಯ ಧಾಬಾದಲ್ಲಿ ಊಟ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿದ್ದಾರೆ. ಈ ಆಕ್ರೋಶಿತ ದಾಳಿಯಲ್ಲಿ ಸುಧಾಕರ್ ಸ್ಥಳದಲ್ಲೇ ಸಾವಿಗೀಡಾಗಿದ್ದು ಸಹೋದರ ಸಿದ್ರಾಮ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿಯುತ್ತಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಆಳಂದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಹಿಂದಿನ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಹಲವಾರು ಮಾರ್ಗಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ದುಷ್ಕರ್ಮಿಗಳ ಗುರುತು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆ, ಹೆಚ್ಚಿನ ಪೊಲೀಸ್ ಬಲವನ್ನು ನಿಯೋಜಿಸಲಾಗಿದೆ. ಆಳಂದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ವಾಹಿನಿಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ.9008329745

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ