ಒಳಮೀಸಲಾತಿಯ ಸಮಗ್ರ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಯವರು ತಪ್ಪದೇ ತಮ್ಮ ತಮ್ಮ ಮೂಲಜಾತಿಯನ್ನು ನೊಂದಾಯಿಸಲು ಆಹಾರ ಸಚಿವ ಕೆಹೆಚ್. ಮುನಿಯಪ್ಪ ಸೂಚನೆ

KTN Admin
1 Min Read

ಪಕ್ಷಾತೀತವಾಗಿ ಎಲ್ಲಾ ನಾಯಕರು ಕಾರ್ಯನಿರ್ವಹಿಸಬೇಕು*

30 ವರ್ಷಗಳ ಹೋರಾಟದ ಫಲ ಸದುಪಯೋಗ ಪಡಿಸಿಕೊಳ್ಳಲು ಸಮುದಾಯದ ಎಲ್ಲಾ ನಾಯಕರು ಒಟ್ಟಾಗಿ ಶ್ರಮಿಸಬೇಕು

ಬೆಂಗಳೂರು14: ಬೆಂಗಳೂರಿನ ಮಯೂರ ಹೋಟೆಲ್‌ ನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಸಮುದಾಯದ ಮುಖಂಡರೊಂದಿಗೆ ಚರ್ಚೆ ನಡೆಸಿದರು.

ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ರವರ ಏಕ ಸದಸ್ಯ ಆಯೋಗದ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯಲ್ಲಿನ 101 ಉಪ ಜಾತಿಗಳ ದತ್ತಾಂಶ ಸಂಗ್ರಹಣೆಗಾಗಿ ಮೇ 6 ರಿಂದ ಸಮಗ್ರ ಸಮೀಕ್ಷೆ ನಡೆಸುತ್ತಿದ್ದು ರಾಜ್ಯದಾದ್ಯಂತ ಉತ್ತಮ ಸ್ಪಂದನೆಯಿಂದ ಉಪ ಜಾತಿಯ ಮಾಹಿತಿಯನ್ನು ನೀಡಿದ್ದು ಸ್ವಾಗತಿಸುತ್ತೇನೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲಾರು ಒಟ್ಟಾಗಿ ಕೆಲಸ ಮಾಡಬೇಕು ಪಕ್ಷಾತೀತವಾಗಿ ನಾವು ಕೆಲಸ ಮಾಡಬೇಕಾಗುತ್ತದೆ.

ಸಮೀಕ್ಷೆಯು ಪರಿನಾಮಕಾರಿಯಾಗಿ ಮತ್ತು ಯಶಸ್ವಿಯಾಗಿಸಲು ಎಲ್ಲಾ ಮುಖಂಡರು ಕಾರ್ಯ ನಿರ್ವಹಿಸಬೇಕು ನಮ್ಮ ಸಮುದಾಯದ ಎಲ್ಲಾ ಸ್ವಾಮೀಜಿಗಳು ಹಾಗೂ ನಾಯಕರು,ಇದರ ಯಶಸ್ವಿಗೆ ಶ್ರಮಿಸಬೇಕು ಎಂದರು.

ಬೆಂಗಳೂರು ನಗರದಲ್ಲಿ ಹೆಚ್ಚಿನ ಜನಸಂಖ್ಯೆ ಇದ್ದು ಇಲ್ಲಿಯವರೆಗೂ ಶೇ 46% ಜನಸಂಖ್ಯೆ ಮಾತ್ರ ತಮ್ಮ ಮೂಲ ಜಾತಿಯನ್ನು ನೊಂದಾಯಿಸಿದ್ದು ಇನ್ನೂ ಹೆಚ್ಚಿನ ಜನ ನೊಂದಣಿ ಮಾಡದಿರುವ ಕಾರಣ ಇಂದು ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಬರುವ 192 ವಾರ್ಡಗಳಲ್ಲಿ ಪರಿಶಿಷ್ಟ ಜಾತಿಯ ಪ್ರಮುಖ ಮುಖಂಡರೊಂದಿಗೆ ಇಂದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ಹಾಗೂ ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ರವರ ನೇತೃತ್ವದಲ್ಲಿ ಸಭೆಯನ್ನು ನಡೆಸಲಾಯಿತು.

ಸಮಗ್ರ ಸಮೀಕ್ಷೆಯಲ್ಲಿ ನಾಗರಿಕರು ಕೆಲಸಗಳ ಒತ್ತಡದಿಂದ ಗಣತಿದಾರರಿಗೆ ಸಿಗದ‌ಕಾರಣ ಅವರಿಗೆ ಅನುಕೂಲವಾಗುವಂತೆ ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ನಡೆಸಲು ಸಭೆಯಲ್ಲಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಪಾಲನಹಳ್ಳಿ ಸ್ವಾಮೀಜಿಗಳಾದ ಸಿದ್ದರಾಜು ಸ್ವಾಮೀಜಿ,ಮಾಜಿ ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ, ಮಾಜಿ ಸಂಸದರಾದ ಚಂದ್ರಪ್ಪ, ಮಾಜಿ.ಮೇಯರ್ ನಾರಾಯಣ,ಹಾಗೂ ನಿವೃತ್ತ ಐಎಎಸ್ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ