ರಾಷ್ಟ್ರೀಯ ಅಂಬೇಡ್ಕರ್ ಸೇನೆಯಿಂದ ಪ್ರತಿಭಟನೆ

YDL NEWS
1 Min Read

ಬೆಂಗಳೂರು ; ರಾಷ್ಟ್ರೀಯ ಅಂಬೇಡ್ಕರ್ ಸೇನೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ತಮಟೆ ಚಳುವಳಿ ನಡೆಯಿತ್ತು. ಬಿಬಿಎಂಪಿ ಅರಣ್ಯ ಉಪ ಸಂರಕ್ಷಣಾಧಿಕಾರಿ ವಿರುದ್ಧ ಪ್ರತಿಭಟನೆ ಮಾಡಲಾಯಿತು. ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ ಅರಣ್ಯ ಘಟಕದಿಂದ..

ಮರಗಳನ್ನು ಸರಿಯಾಗಿ ನಿರ್ವಹಣೆ ಮಾಡಿಸದೆ ಸುಮಾರು 10ಕ್ಕೂ ಹೆಚ್ಚು ಮಂದಿಯ ಸಾವಿಗೆ ಕಾರಣರಾಗಿರುವ 

ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಲ್.ಜಿ.ಸ್ವಾಮಿ ಅವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕು, ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ನೂರಕ್ಕೂ ಹೆಚ್ಚು ಜನರಿಂದ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯಲ್ಲಿ ಮೃತರ ಕುಟುಂಬಸ್ಥರಿಗೆ 50 ಲಕ್ಷ ರೂ. ಪರಿಹಾರ ನೀಡಬೇಕು ಅಂತಾ ಆಗ್ರಹಿಸಿದರು.

 

ಪ್ರತಿಭಟನೆ ಅಲ್ಲಿ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಅಧ್ಯಕ್ಷರು ಅರ್ಜುನ್ ಗೋಪಾಲಯ್ಯ, ಸಮತಾ ಸೈನಿಕ ದಳದ ಯುವ ಘಟಕದ ಅಧ್ಯಕ್ಷರು ಡಾ .ಗೋವಿಂದಯ್ಯ ಜಿ, ಪರಿಸರ ಸಂರಕ್ಷಣಾ ಸಮಿತಿಯ ಅಧ್ಯಕ್ಷರು ಶ್ರೀನಿವಾಸರವರು, ರಾಷ್ಟ್ರೀಯ ಅಂಬೇಡ್ಕರ್ ಸೇನೆ ಸಂಘಟನಾ ಕಾರ್ಯದರ್ಶಿ ರವಿಕುಮಾರ್ ಮುಂತಾದವರು ಭಾಗವಹಿಸಿದ್ದರು.

 

ವರದಿ :: ಎನ್ ಒ ಬಿಂದು

Share This Article