ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ಪ್ರತಿಭಟನೆ

YDL NEWS
1 Min Read

ತುಮಕೂರು: ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯದ ವಿರುದ್ಧ ಇಂದು ಇಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಯಡಿಯೂರಪ್ಪ, ಶಾಸಕರಾದ ಸುರೇಶ್ ಗೌಡ, ಜಿ. ಬಿ. ಜ್ಯೋತಿಗಣೇಶ್, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ರಾಜ್ಯ ಕಾರ್ಯದರ್ಶಿಗಳಾದ ಶ್ರೀಮತಿ ಅಂಬಿಕಾ ಹುಲಿನಾಯ್ಕರ್ ಮತ್ತು ಪ್ರಮುಖರು ಭಾಗವಹಿಸಿದ್ದರು.

ತುಮಕೂರು ಬಿ.ಜಿ.ಎಸ್. ವೃತ್ತದ ವರೆಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಾವಿರಾರು ಜನರು, ರೈತರು, ಕಾರ್ಯಕರ್ತರು ಭಾಗವಹಿಸಿದ್ದರು. ಕೇಂದ್ರ ಸರಕಾರವು ಸಮರ್ಪಕವಾಗಿ ರಸಗೊಬ್ಬರ ನೀಡಿದ್ದರೂ ಅದನ್ನು ರೈತರಿಗೆ ನೀಡುವಲ್ಲಿ ಸರಕಾರ ವಿಫಲವಾಗಿದೆ ಎಂದು ಮುಖಂಡರು ಆಕ್ಷೇಪಿಸಿದರು. ತೊಲಗಲಿ ತೊಲಗಲಿ ಕಾಂಗ್ರೆಸ್ ತೊಲಗಲಿ, ರೈತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂಬಿತ್ಯಾದಿ ಘೋಷಣೆಗಳನ್ನು ಕೂಗಲಾಯಿತು.

Share This Article