ಸಾರ್ವಜನಿಕರೊಂದಿಗೆ ಪೊಲೀಸರು ಉತ್ತಮ ಹಾಗೂ ಸ್ನೇಹಪರ ಸಂಬಂಧವನ್ನು ಬೆಸೆದುಕೊಳ್ಳಲು ಅನುಕೂಲಕರ.

YDL NEWS
1 Min Read

ಏಕೆಂದರೆ, ಕರ್ನಾಟಕ ಸರ್ಕಾರವು ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ನಿರ್ಮಿಸುವ ಮಹತ್ತರ ಉದ್ದೇಶದಿಂದ ‘ಮನೆ ಮನೆಗೆ ಪೊಲೀಸ್’ ಎಂಬ ವಿನೂತನ ಯೋಜನೆಯನ್ನು ಪ್ರಾರಂಭಿಸಿದೆ. ಕಾನೂನು ಜಾರಿ ಸಂಸ್ಥೆಗಳು ಮತ್ತು ಸಾರ್ವಜನಿಕರ ನಡುವೆ ವಿಶ್ವಾಸ, ಸುರಕ್ಷತೆ ಮತ್ತು ನೇರ ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಈ ಯೋಜನೆ, ರಾಜ್ಯದಾದ್ಯಂತ ಜಾರಿಗೆ ಇದೆ ಶಬ್ಬಿರ ಕಲಾದಗಿ ಪಿ ಸಿ ಹೇಳಿದರು

ಹನಮಸಾಗರ ಪೋಲೀಸ ಠಾಣೆಯವ್ಯಾಪ್ತಿಯ ಮಾಸ್ತಕಟ್ಟಿ ಗ್ರಾಮದಲ್ಲಿ ಮನೆಯ ಮನೆಗೆ ಪೋಲೀಸ ಎಂಬ ವಿನೂತನಕಾರ್ಯಕ್ರಮ ನಿಮಿತ್ತ ಗ್ರಾಮದಲ್ಲಿ ರವಿ ಕಿಟಗನ್ನರ ಮನೆಗೆ ಭೇಟಿ ನೀಡಿ ಪೋಲೀಸ ಇಲಾಖೆ ಬಗ್ಗೆ ವಿವರವಾದ ಮಾಹಿತಿ ನೀಡಿದ ಮಾತನಾಡಿದ ಮಹಾಂತೇಶ ಪಿ ಸಿ ಯವರು ಪೋಲೀಸರು ಭಯ ಬೇಡ ಪೋಲೀಸ ಮನೆಗೆ ಬಂದರೆ ಭಯ ಹುಟ್ಟಿಸುವದು ಬೇಡ ಆದರಿಂದ ನಿಮ್ಮ ಜೋತೆ ನಾವು ಇದ್ದವಿ ಎಂದು ಹೇಳಿದರು ಗ್ರಾಮ ಪಂಚಾಯಿತಿಯ ಸಸದಸ್ಯರು ಗ್ರಾಮದ ಮುಖಂಡರು ಯುವಕರು ಇದ್ದರು

ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಮನೆ ಮನೆಗೆ ಪೊಲೀಸ್‌ ಎಂಬ ಯೋಜನೆಯನ್ನು ರಾಜ್ಯ ಸರ್ಕಾರ ವಿನ್ಯಾಸಮಾಡಿದ್ದು, ಈ ಕಾರ್ಯಕ್ರಮದ ಮೂಲಕ, ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಮತ್ತು ಪೊಲೀಸ್‌ ಇಲಾಖೆಗೆ ಅಗತ್ಯವಿರುವ ಮಾಹಿತಿಯನ್ನು ಸಂಗ್ರಹಿಸಲು ಸಹಾಯವಾಗಲಿದೆ. ಸಾರ್ವಜನಿಕರೊಂದಿಗೆ ಪೊಲೀಸರು ಉತ್ತಮ ಹಾಗೂ ಸ್ನೇಹಪರ ಸಂಬಂಧವನ್ನು ಬೆಸೆದುಕೊಳ್ಳಲು ಅನುಕೂಲಕರ ವಾತಾವರಣ ನಿರ್ಮಾಣವಾಗುತ್ತದೆ. ಸ್ಥಳೀಯರಿಂದ ಸೂಕ್ಷ್ಮ ಮಾಹಿತಿಗಳನ್ನು ಪಡೆದುಕೊಳ್ಳಲು, ಅಪರಾಧಗಳನ್ನು ತಡೆಯಲು ಹಾಗೂ ಅಪರಾಧ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಪತ್ತೆ ಮಾಡಲು ಸಾಧ್ಯವಾಗುತ್ತದೆ. ಪೊಲೀಸ್‌ ವ್ಯವಸ್ಥೆಯಲ್ಲಿಸಾರ್ವಜನಿಕ ಸಹಭಾಗಿತ್ವ ಹೆಚ್ಚಾಗಿ, ಇಲಾಖೆ, ಸಾರ್ವಜನಿಕ ಸ್ನೇಹಿಯಾಗಿಸಿ, ಸಮಾಜಕ್ಕೆ ಉತ್ತಮ ಪೊಲೀಸ್‌ ಸೇವೆಯನ್ನು ಒದಗಿಸಬಹುದಾಗಿದೆ.

Share This Article