ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಇಂದು ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಜಸ್ಟಿಸ್ ನಾಗಮೋಹನ್ ದಾಸ್ ವರದಿಯ ಅನುಷ್ಠಾನದ ಸಂಬಂಧ ನಡೆದ ಕಾರ್ಯಗಾರದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಎನ ರವಿ ಕುಮಾರ 16 ರಂದು ಕರೆದಿರುವ ವಿಶೇಷ ಸಂಪುಟ ಸಭೆಯಲ್ಲಿ ಅಂಗೀಕಾರ ಮಾಡಿ ಜಾರಿಗೋಳಿಸಬೇಕು ಎಂದು ಎನ್ ರವಿ ಕುಮಾರ ಸಿಎಂ ಸಿದ್ದರಾಮಯ್ಯ ನವರನ್ನು ಆಗ್ರಸಿದರು.
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡುವ ಸಂಬಂಧ ನಾಗಮೋಹನ್ ದಾಸ್ ಸಲ್ಲಿಸಿರುವ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಅಂಗೀಕರಿಸಬೇಕು. ಆದರೆ, ಕಾಂಗ್ರೇಸ್ ಸರ್ಕಾರ ವರದಿ ಜಾರಿಗೆ ಮೀನಮೇಷ ಎಣಿಸುತ್ತಿದೆ. ಇದಕ್ಕೆ ಕಾರಣ ಗೊತ್ತಾಗುತ್ತಿಲ್ಲ,ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವು
ದಾಗಿ ಮುಖ್ಯಮಂತ್ರಿ ತಿಳಿಸಿದ್ದರು. ಈಗ 16ರಂದು ಮತ್ತೊಂದು ವಿಶೇಷ ಸಂಪುಟ ಸಭೆ ಕರೆಯುತ್ತಿದ್ದಾರೆ. ಸರ್ಕಾರ ಪದೇ ಪದೇ ಮಾತು ತಪ್ಪುವ ಕೆಲಸ ಮಾಡುತ್ತಿದೆ’. ಕಾಂತರಾಜ ಆಯೋಗದ ವರದಿ ಯಂತೆ ನಾಗಮೋಹನ್ ದಾಸ್ ವರದಿಯನ್ನೂ ಜಾರಿಗೊಳಿಸದೆ ಕಾಲಹರಣ ಮಾಡಬಾರದು. ಆದಷ್ಟು ಬೇಗ ವರದಿಯನ್ನು ಜಾರಿಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಹೋರಾಟ ನಡೆಯಲಿದೆ.
ನಮ್ಮ ಹಿಂದಿನ ಯಡಿಯೂರಪ್ಪ ಅವರ ಹಾಗೂ ಬೊಮ್ಮಾಯಿ ನೇತೃತ್ವದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಹೆಚ್ಚಿನ ಮೀಸಲಾತಿ ಮತ್ತು ಅಭಿವೃದ್ಧಿಗೆ ಹೆಚ್ಚಿಗೆ ಅನುದಾನ ನೀಡಿತ್ತು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳು ಮತ್ತು ಸಂಸದರಾದ ಶ್ರೀ ಗೋವಿಂದ ಕಾರಜೋಳ, ಕೇಂದ್ರದ ಮಾಜಿ ಸಚಿವರಾದ ಶ್ರೀ ಎ. ನಾರಾಯಣಸ್ವಾಮಿ,ಶಾಸಕರಾದ ಶ್ರೀ ಬಸವರಾಜ ಮತ್ತಿಮಡು, ಶಾಸಕರಾದ ಶ್ರೀ ದುರ್ಯೋಧನ ಐಹೊಳೆ, ಮಾಜಿ ಶಾಸಕರಾದ ಶ್ರೀ ಬಸವರಾಜ್ ಧಡೆಸಗುರ, ಬಿಜೆಪಿ ರಾಜ್ಯ ವಕ್ತಾರರಾದ ಶ್ರೀ ಹೆಚ್. ವೆಂಕಟೇಶ್ ದೊಡ್ಡೇರಿ , ಎಸ್.ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಶ್ರೀ ಹೂಡಿ ಮಂಜುನಾಥ್,ಮತ್ತು ನಿವೃತ್ತ ಐಎಎಸ್ ಅಧಿಕಾರಿಯಾದ ಶ್ರೀ ಅನಿಲ್ ಕುಮಾರ್ ಉಪಸ್ಥಿತರಿದ್ದರು