ಬಾಗಲಕೋಟೆ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಗೆಲುವಿಗೆ ಕಾರಣರಾದ ವಿಜಯಾನಂದ ಕಾಶಪ್ಪನವರ್ ಸಚಿವ ಸ್ಥಾನಕ್ಕೆ ಆಗ್ರಹ

KTN Admin
2 Min Read

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಬಾಗಲಕೋಟೆ ಜಿಲ್ಲೆ ಹುನಗುಂದ ಕ್ಷೇತ್ರದ ಶಾಸಕ, ಹಿರಿಯ ನಾಯಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕು. ಲಿಂಗಾಯತ ಪಂಚಮಸಾಲಿ ಜನಾಂಗದ ನಾಯಕರಾಗಿರುವ ಕಾಶಪ್ಪನವರ್ ಗೆ ಅವಕಾಶ ಕಲ್ಪಿಸುವ ಮೂಲಕ ಬಾಗಲಕೋಟೆ ಜಿಲ್ಲೆಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕೆಂದು ಇಳಕಲ್ ತಾಲ್ಲೂಕು ಲಿಂಗಾಯತ ಪಂಚಮಸಾಲಿ ಅಧ್ಯಕ್ಷ ಮಹಾತಗೌಡ ಪಾಟೀಲ, ಹುನಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾದರ ದೊಡ್ಡಮನಿ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಡಿಯಲ್ಲಿ ಮಾತನಾಡಿದ ಅವರು. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ವಿಜಯಾನಂದ ಕಾಶಪ್ಪನವರ್ ನೇತೃತ್ವದಲ್ಲಿ ನಡೆದ ಹೋರಾಟದಿಂದ ಬಾಗಲಕೋಟೆ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧ್ಯವಾಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವಾಗಿರುವ ಅವರಿಗೆ ಸಚಿವ ಸ್ಥಾನ ಕಲ್ಪಿಸಬೇಕು ಎಂದು ಹೇಳಿದರು.

ವಿಜಯಾನಂದ ಕಾಶಪ್ಪನವರ್ ಹುನಗುಂದ ಕ್ಷೇತ್ರದಿಂದ 2 ನೇ ಬಾರಿ ಆಯ್ಕೆಯಾಗಿದ್ದಾರೆ. ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟ ಸಮಿತಿಯ ರಾಷ್ಟ್ರೀಯ ಅಧ್ಯಕ್ಷರಾಗಿ, ರಾಜ್ಯದಾದ್ಯಂತ 700 ಕಿ.ಮೀ ಪಾದಯಾತ್ರೆ ಮಾಡಿ ಪಂಚಮಸಾಲಿ ಸಮುದಾಯವನ್ನು ಸಂಘಟನೆ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯಲು ಅವರ ಕೊಡುಗೆ ಹೆಚ್ಚಿದ್ದು, ಎನ್‍ಆರ್‍ಸಿ, ಸಿಆರ್‍ಎನ್ ರದ್ದಿಗಾಗಿ ಇಳಕಲ್ ನಿಂದ ಬಿಜಾಪುರ ವರೆಗೆ ಪಾದಯಾತ್ರೆ ಮಾಡಿದ್ದಾರೆ. ಜನಪರ ಹೋರಾಟಗಾರನಿಗೆ ಅವಕಾಶ ಕಲ್ಪಿಸಬೇಕು ಎಂದರು.

ಎರಡು ದಶಕಗಳಿಂದ ಹುನಗುಂದ ಕ್ಷೇತ ಅಧಿಕಾರ ವಂಚಿತವಾಗಿದೆ. ಸ್ವಾಂತಂತ್ರ ನಂತರ ಸಿ.ಎಸ್.ಆರ್. ಕಂಠಿ, ಎಸ್.ಬಿ. ನಾಗರಾಳ ಮತ್ತು ಎಸ್.ಆರ್. ಕಾಶಪ್ಪನವರ್ ಮಾತ್ರ ಸಚಿವರಾಗಿದ್ದು ನಂತರ ಯಾವುದೇ ಸ್ಥಾನ ಮಾನ ಸಿಕ್ಕಿಲ್ಲ. ವಿಜಯಾನಂದ ಕಾಶಪ್ಪನವರ್ ತಂದೆ ಎಸ್.ಆರ್. ಕಾಶಪ್ಪನವರ್ 3 ಬಾರಿ ಹಾಗೂ ತಾಯಿ ಗೌರಮ್ಮ ಕಾಶಪ್ಪ 1 ಬಾರಿ ವಿಧಾನ ಸಭೆಗೆ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದರು. ಕಳೆದ 40 ವರ್ಷಗಳಿಂದ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸುವ ಜೊತೆಗೆ ಕಾಶಪ್ಪನವರ್ ಕುಟುಂಬ ಪಕ್ಷವನ್ನು ಗಟ್ಟಿಗೊಳಿಸಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಇಳಕಲ್ಲ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ ರಜಾಕ್ ತಟಗಾರ್, ಕರ್ನಾಟಕ ರಾಜ್ಯ ಬೋವಿ ವಡ್ಡರ್ ಮಹಾಸಭಾ ರಾಜ್ಯ ಕಾರ್ಯದರ್ಶಿ ಹುಲ್ಲಪ್ಪ ಹಳ್ಳೂರ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಿತ ರಕ್ಷಣಾವೇದಿಕೆ ಕಾರ್ಯದರ್ಶಿ ಸುರೇಶ್ ಜಂಗ್ಲಿ, ಮಡಿವಾಳ ಮಾಚಿದೇವ ಸಮಾಜ ಅಧ್ಯಕ್ಷ ವಿರೇಶ್ ಮಡಿವಾಳರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಮಹಾಂತೇಶ್ ನರಗುಂದ್ ಉಪಸ್ಥಿತರಿದ್ದರು.

 


ಕನ್ನಡ ಟುಡೇ ನ್ಯೂಸ್ ಚಾನಲ್ ನಲ್ಲಿ ಕಾರ್ಯನಿರ್ವಸಲು ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ. 9008329745

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ